Breaking News
Home / Featured / ತಾಜ್ ಮಹಲ್ ನಲ್ಲಿ ನಮಾಜ್ ಮಾಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ..!

ತಾಜ್ ಮಹಲ್ ನಲ್ಲಿ ನಮಾಜ್ ಮಾಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಈ ವಿಚಾರವಾಗಿ ಸಾಕಷ್ಟು ಚರ್ಚೆಗಳು ಮತ್ತು ವಿವಾಹದಗಳು ಇರುವ ಬೆನ್ನಲ್ಲೇ ತಾಜ್ ಮಹಲ್ ನಲ್ಲಿ ನಮಾಜ್ ಮಾಡುವ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ತೀರ್ಪು ನೀಡಿದೆ.

ತಾಜ್ ಮಹಲ್ ವಿಶ್ವದ 7 ಅದ್ಭುತಗಳಲ್ಲಿ ಒಂದಾಗಿದ್ದು ಅಲ್ಲಿ ನಮಾಜ್ ಮಾಡಬಾರದು ಎಂದು ಸುಪ್ರಿಂ ಕೋರ್ಟ್ ಮಹತ್ವದ ಆದೇಶ ಪ್ರಕಟಿಸಿದೆ.

ನ್ಯಾಯಮೂರ್ತಿಗಳಾದ ಎ.ಕೆ. ಸಿಕ್ರಿ ಮತ್ತು ಅಶೋಕ್ ಭೂಷಣ್ ನೇತೃತ್ವದ ದ್ವಿಸದಸ್ಯ ಪೀಠ, ತಾಜ್ ಮಹಲ್ ವಿಶ್ವದ ಏಳು ಅದ್ಭುತಗಳಲ್ಲಿ ಒಂದಾಗಿದ್ದು, ತಾಜ್ ಮಹಲ್ ನಲ್ಲಿ ನಮಾಜ್ ಮಾಡಬಾರದು. ನಮಾಜ್ ಮಾಡಲು ಸಮೀಪವೇ ಹಲವು ಮಸೀದಿಗಳಿವೆ. ಜನರು ಅಲ್ಲಿಯೇ ಹೋಗಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಪ್ರಾರ್ಥನೆ ಸಲ್ಲಿಸಲು ತಾಜ್ ಮಹಲ್‍ಗೆ ಯಾಕೆ ಹೋಗಬೇಕು ಎಂದು ಪ್ರಶ್ನಿಸಿದ ಪೀಠ, ತಾಜ್ ಮಹಲ್ ವಿಶ್ವದ ಅದ್ಭುತ ಪ್ರದೇಶವಾಗಿದ್ದು, ಇಲ್ಲಿಗೆ ದಿನನಿತ್ಯ ಸಾವಿರಾರು ಪ್ರವಾಸಿಗರೂ ವರ್ಷಪೂರ್ತಿ ಆಗಮಿಸುತ್ತಲೇ ಇರುತ್ತಾರೆ. ಹೀಗಾಗಿ ತಾಜ್ ಮಹಲ್ ನಲ್ಲಿ ಪ್ರಾರ್ಥನೆಗೆ ಅವಕಾಶ ನೀಡುತ್ತಿಲ್ಲ. ಅವಕಾಶ ನೀಡಿದರೆ ಭದ್ರತೆಗೆ ಸಮಸ್ಯೆಯಾಗುತ್ತದೆ. ಅಲ್ಲಿಗೆ ತೆರಳಿ ಪ್ರಾರ್ಥನೆ ಸಲ್ಲಿಸುವ ಬದಲು ಸಮೀಪವೇ ಇರುವ ಬೇರೆ ಮಸೀದಿಗಳಿಗೆ ತೆರಳಬಹುದು ಎಂದು ತನ್ನ ಆದೇಶದಲ್ಲಿ ಹೇಳಿದೆ.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಶತ್ರುಭಾದೆ ನಿವಾರಣೆಗೆ ಭಾನುವಾರ ಸೂರ್ಯ ದೇವನ ನೆನೆದು ಹೀಗೆ ಮಾಡಿ..!

ವ್ಯವಹಾರಿಕ ಜೀವನದಲ್ಲಿ ಮನುಷ್ಯನಿಗೆ ಶತ್ರುಗಳು ಇರುವುದು ಸರ್ವೇ ಸಾಮಾನ್ಯ ನಿಮ್ಮ ಏಳಿಗೆಯನ್ನ ಅವರು ಸಹಿಸುವುದಿಲ್ಲ ನಿಮ್ಮ ಯಲ್ಲ ಚಲನ ವಲನಗಳನ್ನ …

Leave a Reply

Your email address will not be published. Required fields are marked *