Breaking News
Home / Featured / 2019ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮೋದಿ ಜೊತೆ ಮುಖ್ಯ ಅತಿಥಿ ಯಾರು ಗೊತ್ತಾ..!

2019ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮೋದಿ ಜೊತೆ ಮುಖ್ಯ ಅತಿಥಿ ಯಾರು ಗೊತ್ತಾ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಪ್ರತಿ ಭಾರಿಯೂ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳು ಬರುತ್ತಾರೆ ಆದ್ರೆ ಅದು ಇತ್ತೀಚಿಗೆ ಅದರ ಮಹತ್ವ ಹೆಚ್ಚಾಗಿದೆ ಮೋದಿ ಪ್ರಧಾನ ಮಂತ್ರಿ ಆದಮೇಲೆ ಯಾವ ಯಾವ ನಾಯಕರು ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬರುತ್ತಾರೆ ಅನ್ನೋದು ಕುತೂಹಲ ಹಾಗೆ ಈ ಭಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಯಾರು ಮುಖ್ಯ ಅತಿಥಿ ಅನ್ನೋದು ಇಲ್ಲಿದೆ ನೋಡಿ.

ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವಂತೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಭಾರತ ಸರ್ಕಾರ ಆಹ್ವಾನ ನೀಡಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಕಳೆದ ಏಪ್ರಿಲ್ ನಲ್ಲೇ ಭಾರತ ಅಮೆರಿಕ ಅಧ್ಯಕ್ಷರ ಶ್ವೇತಭವನಕ್ಕೆ ಆಹ್ವಾನವನ್ನು ಕಳುಹಿಸಿದೆ. ಇದಕ್ಕೆ ಶ್ವೇತಭವನದ ಆಡಳಿತ ಮಂಡಳಿ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ಪತ್ರಿಕೆಯೊಂದು ವರದಿ ಮಾಡಿದೆ.

ಭಾರತದ ಆಹ್ವಾನವನ್ನು ಒಪ್ಪಿಕೊಂಡರೆ ಬರಾಕ್ ಒಬಾಮ ನಂತರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಳ್ಳುತ್ತಿರುವ ಎರಡನೆಯ ಅಮೆರಿಕದ ಅಧ್ಯಕ್ಷ ಎಂಬ ಗೌರವಕ್ಕೆ ಟ್ರಂಪ್ ಪಾತ್ರರಾಗಲಿದ್ದಾರೆ. 2015ರಲ್ಲಿ ಮಾಜಿ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಂಡಿದ್ದರು.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಈ ದಿನದ ರಾಶಿ ಭವಿಷ್ಯ ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು ಅವರಿಂದ..!

ಪಂಡಿತ್ ಸುದರ್ಶನ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9663542672ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ …

Leave a Reply

Your email address will not be published. Required fields are marked *