Breaking News
Home / Featured / ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ, ಇವತ್ತೇ ಅರ್ಜಿ ಹಾಕಿ ಸಂಬಳ 18 ರಿಂದ 30 ಸಾವಿರ..!

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ನೇಮಕಾತಿ, ಇವತ್ತೇ ಅರ್ಜಿ ಹಾಕಿ ಸಂಬಳ 18 ರಿಂದ 30 ಸಾವಿರ..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ನೆಡುತೋಪು ವೀಕ್ಷಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರಣ್ಯ ವೀಕ್ಷಕ ಹುದ್ದೆಗೆ ಅರ್ಜಿ ಸಲ್ಲಿಸುಲು ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ 6-3-2019ರೊಳಗೆ ಅರ್ಜಿ ಸಲ್ಲಿಸಬಹುದು.

ಅರಣ್ಯ ವೀಕ್ಷಕ ಹುದ್ದೆಗಳಿಗೆ ಎಸ್‌ಸಿ, ಎಸ್‌ಟಿ, ಒಬಿಸಿ ಹಾಗೂ ಸಾಮಾನ್ಯ ವರ್ಗ ಸೇರಿದಂತೆ ಜಾತಿವಾರು ಮೀಸಲಾತಿ ನೀಡಲಾಗಿದ್ದು, ಒಟ್ಟು 42 ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.

ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ಹಾಗೂ ಗರಿಷ್ಠ ವಯೋಮಿತಿ 30 ವರ್ಷಗಳನ್ನು ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ವೇತನ ಶ್ರೇಣಿ : 18,600 ರಿಂದ 32,600 ರೂ.

ಆಯ್ಕೆ ವಿಧಾನ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲಾತಿಗಳ ಪರಿಶೀಲನೆ, ಮೆರಿಟ್ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ www.kfdc.kar.nic.in

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅವಕಾಶ ಸಿಕ್ರೆ ಖಂಡಿತಾ ಅಂಬಿ ಪ್ರೀತಿಯ ಋಣ ತೀರಿಸುವೆ ಎಂದ ಸುಮಲತಾ, ನಿಮ್ಮ ಪ್ರಕಾರ ಯಾವ ಪಕ್ಷದನ್ನು ಸ್ಪರ್ದಿಸಬೇಕು..!

ಮಂಡ್ಯ ಲೋಕಸಭಾ ಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧೆ ಮಾಡುವ ಇಂಗಿತವನ್ನು ಸಮಲತಾ ಅಂಬರೀಶ್ ಅವರು ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ …

Leave a Reply

Your email address will not be published. Required fields are marked *