ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ 9,000 ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಸೋಸಿಯೇಟ್ ಹುದ್ದೆ (ಗ್ರಾಹಕ ಸೇವೆ ಮತ್ತು ಸೇಲ್ಸ್) ಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿ ಅಥವಾ ಅದಕ್ಕೆ ಸರಿಸಮಾನಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.
ವಯೋಮಿತಿ,
ಗರಿಷ್ಠ 28 ವರ್ಷವನ್ನು ಮೀರಿರಬಾರದು.
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಪೂರ್ವಭಾವಿ ಪರೀಕ್ಷೆ ಮತ್ತು ಮುಖ್ಯ ಪರೀಕ್ಷೆ ನಡೆಯಲಿದೆ. ನಂತರ ಭಾಷಾ ಪರೀಕ್ಷೆ ನಡೆಯಲಿದೆ. ಮುಖ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಭಾಷಾ ಪರೀಕ್ಷೆ ನಡೆಯಲಿದೆ.
ಪೂರ್ವಭಾವಿ ಪರೀಕ್ಷೆ ವಿವರ :
ಪೂರ್ವಭಾವಿ ಪರೀಕ್ಷೆಯಲ್ಲಿ ಬಹು ಆಯ್ಕೆಯ ಪ್ರಶ್ನೆಗಳು ಇರಲಿವೆ. ಒಟ್ಟು 100 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಮೂರು ವಿಭಾಗದ ಪ್ರಶ್ನೆಗಳನ್ನು ಇರಲಿದ್ದು ಒಂದು ಗಂಟೆ ಸಮಯಾವಕಾಶದಲ್ಲಿ ಉತ್ತರಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ:
ಎಸ್.ಬಿ.ಐನ ಅಧಿಕೃತ ವೆಬ್ಸೈಟ್ sbi.co.in ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ. ನಂತರ ನೋಂದಣಿ ಶುಲ್ಕವನ್ನು ಪಾವತಿಸಬೇಕು. ಎಲ್ಲಾ ಪ್ರಕ್ರಿಯೆಗಳನ್ನು ಆನ್ಲೈನ್ ನಲ್ಲೇ ನಡೆಸಬೇಕಾಗಿದೆ.
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ ೧೦
ಪೂರ್ವಭಾವಿ ಪರೀಕ್ಷೆ: ಮಾರ್ಚ್/ ಏಪ್ರಿಲ್ * ಮುಖ್ಯ ಪರೀಕ್ಷೆ: ಮೇ 12