Breaking News
Home / Featured / ಮಲೆನಾಡಿನಲ್ಲಿ ತುಪ್ಪ ಎಂದು ಬಳಸಲ್ಪಡುವ ಈ ಹಣ್ಣಿನಲ್ಲಿ ಅಡಗಿದೆ ಹಲವು ಲಾಭಗಳು..!

ಮಲೆನಾಡಿನಲ್ಲಿ ತುಪ್ಪ ಎಂದು ಬಳಸಲ್ಪಡುವ ಈ ಹಣ್ಣಿನಲ್ಲಿ ಅಡಗಿದೆ ಹಲವು ಲಾಭಗಳು..!

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

ಹೌದು ಈ ಹಣ್ಣು ತುಂಬ ವಿಶೇಷ ಇದರ ಲಾಭಗಳು ಮತ್ತು ಬಳಕೆ ಹೇಗೆ ಅನ್ನೋದು ಇಲ್ಲಿದೆ ನೋಡಿ.

ಉಪಯೋಗಗಳು/ಬಳಕೆಗಳು
ಈ ಹಣ್ಣಿನ ಒಣಸಿಪ್ಪೆ ಸಂಸ್ಕರಿಸಿ ಮಂದಸಾರ ತಯಾರಿಸುತ್ತಾರೆ. ಇದು ಕೊಡಗು ಹಾಗೂ ಕೇರಳದಲ್ಲಿ ಹಂದಿಮಾಂಸದ ಮತ್ತು ಮೀನಿನ ಅಡುಗೆಗಳಿಗೆ ಬಳಸಲ್ಪಡುತ್ತದೆ. ಕೊಡಗಿನಲ್ಲಿ ಕೃಷಿಕರು ಮಳೆಗಾಲದಲ್ಲಿ ಉಪ್ಪಾಗೆ ಹಣ್ಣನ್ನು ಸಂಗ್ರಹಿಸಿ ಒಣಗಿಸಿಡುತ್ತಾರೆ.

ಇದನ್ನು ಮಾಂಸಹಾರಕ್ಕೆ ಹುಳಿ ಪದಾರ್ಥವಾಗಿ ಬಳಸುತ್ತಾರೆ. ಕೆಲವು ಪದಾರ್ಥಗಳಿಗೆ ಉಪ್ಪಾಗೆಯ ಒಣಗಿಸಿದ ಸಿಪ್ಪೆಯನ್ನು ಉಪಯೋಗಿಸಿದರೆ ಹಣ್ಣಿನ ನೀರನ್ನು ಇಂಗಿಸಿ ತಯಾರಿಸಿದ ಹುಳಿನೀರು ಕೂಡ ಹೆಚ್ಚಾಗಿ ಬಳಸುತ್ತಾರೆ. ಒಂದುಕಿಲೋ ಒಣಸಿಪ್ಪೆ ಆಗಲು ಸುಮಾರು ಮೂರುಕಿಲೋ ಹಣ್ಣುಗಳು ಬೇಕಾಗುತ್ತವೆ. ಸರಿಯಾಗಿ ಒಣಗಿದೆ ಸಿಪ್ಪೆಯನ್ನು ಎರಡು ವರ್ಷಗಳ ಕಾಲ ಕೆಡದೇ ಇಡಬಹುದು. ಉಪ್ಪು ಸೇರಿಸಿ ಗಾಳಿಯಾಡದಂತೆ ಕಟ್ಟಿಟ್ಟರೆ ಇನ್ನೂ ಹೆಚ್ಚಿನ ಕಾಲ ಇಡಬಹುದು.

ಮಾನವನ ದೇಹದ ಕೊಬ್ಬು ಮತ್ತು ಬೊಜ್ಜನ್ನು ಕರಗಿಸಲು ಸಹಾಯವಾಗುವುದೆಂದು ಹೇಳಲಾಗುವ ಹೈಡ್ರಾಕ್ಸಿ ಸಿಟ್ರಿಕ್ ಅಂಶ ಉಪ್ಪಾಗೆ ಹೊಂದಿರುವುದರಿಂದ ಇದಕ್ಕೆ ಬಹುಬೇಡಿಕೆಯಿದೆ.

ಉಪ್ಪಾಗೆ ಹಣ್ಣಿನ ಸೇವನೆಯಿಂದ ಮಲಬದ್ದತೆ, ಮುಟ್ಟಿನತೊಂದರೆ, ಜಂತುಹುಳದ ಬಾಧೆ ಮುಂತಾದವುಗಳನ್ನು ನಿವಾರಿಸಬಹುದು.

ಕಣ್ಣುತುರಿ, ಕಾಲಿನ ಒಡಕಿಗೂ ಇದು ಮದ್ದು.
ಹಣ್ಣಿನ ಬೀಜವು ಕೊಬ್ಬಿನಂಶ ಹೊಂದಿದ್ದು ಇದರಿಂದ ತುಪ್ಪವನ್ನು ತೆಗೆಯಲಾಗುತ್ತದೆ. ಇದರ ಬೀಜಗಳನ್ನು ಒಣಗಿಸಿ ಕುಟ್ಟಿ ಬೇಯಿಸಿದರೆ ಇದರ ಕೊಬ್ಬು ಖಾದ್ಯ ತೈಲವಾಗಿ ಲಭ್ಯ.

ಇದು ಹಳದಿ ಬಣ್ಣದಿಂದ ತುಪ್ಪದಂತೆ ಗಟ್ಟಿಯಾಗುವ ಗುಣವನ್ನು ಹೊಂದಿದ್ದು ತಿಂಡಿತಿನಿಸುಗಳ ತಯಾರಿಗೆ ಯೋಗ್ಯವಾಗಿದೆ. ಮಲೆನಾಡಿನಲ್ಲಿ ಇದು ಉಪ್ಪಾಗೆ ತುಪ್ಪ ಎಂದು ಬಳಸಲ್ಪಡುತ್ತದೆ.
ಪುನರ್ಪುಳಿಯಂತೆ ಶರಬತ್ತು ಕೂಡ ತಯಾರುಮಾಡಬಹುದು.

SStv ಆಪ್ ಡೌನ್ಲೋಡ್ ಮಾಡಿಕೊಳ್ಳಿ

About SSTV Kannada

Check Also

ಮೈ ಕೊಬ್ಬು ಕರಗಿಸುವ ಕಬ್ಬಿನ ಹಾಲು ಹೇಗೆ ಬಳಕೆ ಮಾಡಬೇಕು ಗೊತ್ತಾ..!

ಬೊಜ್ಜು ಕರಗಿಸುವಲ್ಲಿ ಕಬ್ಬಿನ ಹಾಲು ಹೇಗೆ ಸಹಕಾರಿಯಾಗಿವೆ ಎಂಬುವುದರ ಮಾಹಿತಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ. ಒಂದು ಲೋಟ ಕಬ್ಬಿನ ಹಾಲು ಕುಡಿಯುವುದರಿಂದ …

Leave a Reply

Your email address will not be published. Required fields are marked *