Breaking News
Home / Featured / ಬಸವ ಜಯಂತಿ ಪ್ರಯುಕ್ತ ಪ್ರೊ ಚಂದ್ರಶೇಖರ ಪಾಟೀಲ ಅವರಿಗೆ ಮುರುಘಾಮಠದಿಂದ ಬಸವ ಪ್ರಶಸ್ತಿ ಪ್ರಧಾನ..!

ಬಸವ ಜಯಂತಿ ಪ್ರಯುಕ್ತ ಪ್ರೊ ಚಂದ್ರಶೇಖರ ಪಾಟೀಲ ಅವರಿಗೆ ಮುರುಘಾಮಠದಿಂದ ಬಸವ ಪ್ರಶಸ್ತಿ ಪ್ರಧಾನ..!

ಚಿತ್ರದುರ್ಗ : ಪ್ರತಿವರ್ಷದಂತೆ ಈವರ್ಷ ಸಹ ಬಸವ ಪ್ರಶಸ್ತಿಯನ್ನು ನೀಡಲಾಯಿತು ನಗರದಲ್ಲಿ ಇಂದು ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಪ್ರೊ ಚಂದ್ರಶೇಖರ ಪಾಟೀಲ ಅವರಿಗೆ ಮುರುಘಾಮಠದಿಂದ ಬಸವ ಪ್ರಶಸ್ತಿ ಪ್ರಧಾನ ಮಾಡಲಾಯಿತು ಪಾಟೀಲ ರವರು ಕನ್ನಡ ನಾಡಿನ ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ಬಹುಮುಖ ವ್ಯಕ್ತಿತ್ವದಿಂದ ಪ್ರಸಿದ್ಧರಾಗಿದ್ದಾರೆ.

ವೀರಶೈವ ಸಮಾಜದಿಂದ ಇಂದು ಬಸವ ಜಯಂತಿ ಅಂಗವಾಗಿ ಏರ್ಪಡಿಸಿದ ಬಸವಣ್ಣನವರ ಭಾವಚಿತ್ರ ಮೆರವಣಿಗೆ ನೀಲಕಂಠೇಶ್ವರ ದೇವಸ್ಥಾನದಿಂದ ಅಂಬೇಡ್ಕರ್ ವೃತ ದವರೆಗೂ ಅಪಾರ ಜನಸ್ತೋಮದೊಂದಿಗೆ ಸಾಗಿತು, ಅಧ್ಯಕ್ಷರಾದ ಜಯಣ್ಣ ಕಾರ್ಯದರ್ಶಿ ಪಟೇಲ್ ಶಿವಕುಮಾರ ಹಾಗು ಸಮಾಜದ ಹಲವು ಮುಖಂಡರು ಭಾಗಿಯಾಗಿದ್ದರು.

ಪ್ರೊ ಚಂದ್ರಶೇಖರ ಪಾಟೀಲ ರವರ ಬಗ್ಗೆ ಒಂದಿಷ್ಟು ಮಾಹಿತಿ: ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಆಡಳಿತಗಾರ, ಕನ್ನಡ ಹೋರಾಟಗಾರ ಹೀಗೆ ವಿಭಿನ್ನ ನೆಲೆಗಳ ಚಂದ್ರಶೇಖರ ಪಾಟೀಲರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ ೧೯೩೯ರ ಜೂನ್‌ ೧೮ರಂದು. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. ಚಂದ್ರಶೇಖರ ಪಾಟೀಲರು ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರು. ಪಾಟೀಲರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ನೆರವೇರಿತು.

ಅವರ ತಂದೆಯವರಿಗೆ ಇಂಗ್ಲಿಷ್‌ ಬಗ್ಗೆ ಅಭಿಮಾನವಿದ್ದುದರಿಂದ ಅದರಿಂದ ಪ್ರೇರಿತರಾಗಿ ಇಂಗ್ಲಿಷ್ ಎಂ.ಎ. ಪದವಿ ಗಳಿಸಿದರು. ಇದಲ್ಲದೆ ಬ್ರಿಟಿಷ್‌ ಕೌನ್ಸಿಲ್‌ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯನದ ಡಿಪ್ಲೊಮ ಪಡೆದರು. ಶಿಕ್ಷಣದ ಪ್ರತಿ ಹಂತದಲ್ಲಿಯೂ ಆಗ್ರ ಶ್ರೇಯಾಂಕ ಗಳಿಸಿದ ಕೀರ್ತಿ ಅವರದ್ದಾಗಿತ್ತು.

About SSTV Kannada

Check Also

ಪದೇ ಪದೇ ತಲೆನೋವು ಬರುತ್ತದೆಯೋ ಜಸ್ಟ್ ಹೀಗೆ ಮಾಡಿ ಕ್ಷಣಾರ್ಧದಲ್ಲಿ ಮಾಯವಾಗುತ್ತದೆ..!

ಇತ್ತೀಚಿನ ದಿನಗಳಲ್ಲಿ ಕೆಲಸದ ಒತ್ತಡ, ಬದಲಾದ ವಾತಾವರಣದಿಂದ ತಲೆನೋವು ಅನ್ನೋದು ಸಾಮಾನ್ಯವಾಗಿ ಬರುವಂತ ರೋಗವಾಗಿದೆ. ಇದಕ್ಕೆ ನಾವು ಪ್ರತಿ ದಿನ …

Leave a Reply

Your email address will not be published. Required fields are marked *