Breaking News
Home / Featured / SSLC ಹಾಗು PUC ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಉದ್ಯೋಗಾವಕಾಶ..!

SSLC ಹಾಗು PUC ಆದವರಿಗೆ ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಉದ್ಯೋಗಾವಕಾಶ..!

ಹೌದು ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ಒಟ್ಟು ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1735 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ದೆಹಲಿ, ಹಿಮಾಚಲ ಪ್ರದೇಶ, ಮತ್ತು ಜಾರ್ಖಂಡ ಈ ಮೂರೂ ರಾಜ್ಯದ ವ್ಯಾಪ್ತಿಯಲ್ಲಿ ಬರುವ ಅಂಚೆ ಇಲಾಖೆಯಲ್ಲಿ ಈ ಹುದ್ದೆಗಳು ಖಾಲಿ ಇದ್ದು, ಜುಲೈ 05 , 2019ರೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಹುದ್ದೆಗಳ ವಿವರ: ಗ್ರಾಮೀಣ ಡಾಕ್ ಸೇವಕ(GDS), ಬ್ರಾಂಚ್ ಪೋಸ್ಟ್ ಮಾಸ್ಟರ್ , ಅಸಿಸ್ಟೆಂಟ್ ಪೋಸ್ಟ್ ಮಾಸ್ಟರ್.

ವಿದ್ಯಾರ್ಹತೆ: 10 ನೇ ತರಗತಿ ಉತ್ತೀರ್ಣರಾಗಿರಬೇಕು, ವಯೋಮಿತಿ: 18 ರಿಂದ 40ವರ್ಷ

ಒಟ್ಟು ಹುದ್ದೆಗಳು: 1735 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 804 ಪೋಸ್ಟ್ ಗಳು ಜಾರ್ಖಂಡದಲ್ಲಿ , 757 ಹಿಮಾಚಲ ಪ್ರದೇಶದಲ್ಲಿ ಮತ್ತು 174 ಹುದ್ದೆಗಳು ದೆಹಲಿ.

ಅರ್ಜಿ ಶುಲ್ಕ ವಿವರ: ವರ್ಗ/OBC/EWS ವರ್ಗದ ಪುರುಷ ಅಭ್ಯರ್ಥಿಗಳಿಗೆ Rs 100 ಅರ್ಜಿ ಶುಲ್ಕ. ಮಹಿಳಾ ಅಭ್ಯರ್ಥಿಗಳಿಗೆ ಮತ್ತು SC/ST/PWD ವರ್ಗದವರಿಗೆ ಸರ್ಕಾರದ ನಿಯಮದಂತೆ ಯಾವುದೇ ಶುಲ್ಕ ಅನ್ವಯವಾಗುವುದಿಲ್ಲ.

ವೇತನ ಮಾಹಿತಿ: ಕನಿಷ್ಟ 4 ಗಂಟೆವರೆಗೆ ಕೆಲಸ ಮಾಡಿದವರಿಗೆ, ಬ್ರಾಂಚ್ ಪೋಸ್ಟ್ ಮಾಸ್ಟರ್ ಗೆ Rs 12,000 ಹಾಗೂ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಗ್ರಾಮೀಣ ಡಾಕ್ ಸೇವಕ ನಿಗೆ Rs 10,000 ವೇತನ ಸಿಗಲಿದೆ.

ಕನಿಷ್ಟ 5 ಗಂಟೆ ಮೇಲ್ಪಟ್ಟು ಕೆಲಸ ಮಾಡಿದ ಬ್ರಾಂಚ್ ಪೋಸ್ಟ್ ಮಾಸ್ಟರ್ ಗೆ Rs 14,500 ಮತ್ತು ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಗ್ರಾಮೀಣ ಡಾಕ್ ಸೇವಕ ನಿಗೆ Rs 12,000.

ಆಸಕ್ತ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ www.indiapost.gov.in ನಲ್ಲಿ ಅರ್ಜಿ ಸಲ್ಲಿಸಬಹುದು.

About SSTV Kannada

Check Also

ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರಿಂದ ಈ ದಿನದ ರಾಶಿ ಭವಿಷ್ಯ..!

ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ …

Leave a Reply

Your email address will not be published. Required fields are marked *