Breaking News
Home / Featured / ನೀರಿಗಾಗಿ ಕಾದು ಕೂತ ಮಂದಿಗೆ ನಲ್ಲಿನಲ್ಲಿ ಬಂದಿದ್ದು ರಕ್ತ ಏನಿದು ಘಟನೆ ಗೊತ್ತಾ..!

ನೀರಿಗಾಗಿ ಕಾದು ಕೂತ ಮಂದಿಗೆ ನಲ್ಲಿನಲ್ಲಿ ಬಂದಿದ್ದು ರಕ್ತ ಏನಿದು ಘಟನೆ ಗೊತ್ತಾ..!

ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ರಕ್ತದ ರೀತಿ ನೀರು ಬರುತ್ತಿದೆ.

ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ.

ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ ಖಾನೆ ಹಾಗೂ ಮೀನು ಮಾರುಕಟ್ಟೆಯ ಗಲೀಜು ನೀರು ಕೂಡುತ್ತಿರುವುದರಿಂದ ಕುಡಿಯುವ ನೀರಿನಲ್ಲಿ ರಕ್ತದ ನೀರು ಬರುತ್ತಿದೆ. ಈ ಹಿಂದೆ ಕೂಡಾ ರಸ್ತೆಯ ಮೇಲೆಯೇ ಕಸಾಯಿ ಖಾನೆಯ ನೀರು ಹರಿಯುತ್ತಿತ್ತು. ಆದರೆ ಈಗ ಅದೇ ಕಸಾಯಿ ಖಾನೆ ಹಾಗೂ ಮೀನು ಮಾರುಕಟ್ಟೆಯ ಗಲಿಜು ನೀರು ಜನರ ಮನೆಗೆ ಬರುತ್ತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಒಂದೆಡೆ ಬರಗಾಲದಿಂದ ಕುಡಿಯಲು ನೀರಿಲ್ಲದೇ ಜನರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಆದರೆ ಇಲ್ಲಿಯ ಜನರಿಗೆ ಕುಡಿಯುವ ನೀರು ಹೋಗಲಿ ಬಳಸಲು ಕೂಡ ನೀರಿಲ್ಲದಂತೆ ಆಗಿದೆ. ಇದಕ್ಕೆಲ್ಲ ಪಾಲಿಕೆ ಹಾಗೂ ಜಲ ಮಂಡಳಿಯ ನಿರ್ಲಕ್ಷ್ಯ ಕಾರಣ ಎಂದು ಜನರು ಹಿಡಿ ಶಾಪ ಹಾಕುತ್ತಿದ್ದಾರೆ.

About SSTV Kannada

Check Also

ತುಳು ನಾಡಿನ ಹಿರಿಯ ಬ್ರಾಹ್ಮಣ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರಿಂದ ಈ ದಿನದ ರಾಶಿ ಭವಿಷ್ಯ..!

ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ …

Leave a Reply

Your email address will not be published. Required fields are marked *