ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಶಕ್ತಿ ಯೋಜನೆ ಜಾರಿಯಾಗಿದ್ದರಿಂದ ಮಹಿಳೆಯರು ಫುಲ್ ಖುಷಿಯಾಗಿದ್ದಾರೆ. ಆದರೆ ಖಾಸಗಿ ಸಾರಿಗೆ ಸಂಘಟನೆಗಳು ಸರ್ಕಾರದ ಜಟಾಪಟಿಗೆ ಅಂತ್ಯ ಹಾಡುವ ನಿಟ್ಟಿನಲ್ಲಿ ಇದ್ದಾರೆ.ಸೋಮವಾರ ಸಿಎಂ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಮುಖ್ಯಮಂತ್ರಿಗಳು ಕರೆದ ಸಭೆಯನ್ನು ಕೆಲ ಖಾಸಗಿ ಸಾರಿಗೆ ಸಂಘಟನೆಗಳು ಬಹಿಷ್ಕರಿಸಿವೆ. ಜೊತೆಗೆ ಸರ್ಕಾರಕ್ಕೆ ಮತ್ತೊಮ್ಮೆ ಕರ್ನಾಟಕ ಬಂದ್ ಮಾಡುವ ಎಚ್ಚರಿಕೆ ನೀಡಿವೆ. ಆದರೆ ಇದು ಇನ್ನೂ ಎಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ನಾವು ಮೊದಲಿಗೆ ತಿಳಿದುಕೊಳ್ಳಬೇಕು. ಕರ್ನಾಟಕದ ಸಾರಿಗೆ ಸಚಿವರಾದಂತಹ ರಾಮಲಿಂಗಾರೆಡ್ಡಿ ಸುದ್ದಿಗಾರರಿಗೆ ತಿಳಿಸಿದರು. ಇನ್ನೂ 10 ದಿನ ಕಾಲಾವಕಾಶ ವಿದ್ದು, ಅಷ್ಟರೊಳಗೆ ಮತ್ತೆ ಎಲ್ಲ ಸಂಘಟನೆಗಳು ಸೇರಿಸಭೆ ಕರೆಯಬೇಕು. ಇಲ್ಲದಿದ್ದರೆ ಹೋರಾಟದ ದಾರಿ ಹಿಡಿಯುತ್ತೇವೆ ಎಂದು ತಿಳಿಸಿದ್ದಾರೆ ಸೆಪ್ಟೆಂಬರ್ ಒಂದರಂದು ಬೆಂಗಳೂರು ಅಥವಾ ಕರ್ನಾಟಕ ಬಂದ್ ದಿನಾಂಕ ಪ್ರಕಟಿಸುತ್ತೇವೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಸಚಿವರು ಮತ್ತು ಶಾಸಕರೊಂದಿಗೆ ಸಭೆ ನಡೆಸುತ್ತಿದ್ದಂತೆ. ನಗರದಲ್ಲಿ ಸ್ಥಗಿತಗೊಂಡಿರುವ ಪುರಸಭೆ ಮಟ್ಟದ ಸಾರ್ವಜನಿಕ ಕಾಮಗಾರಿಗಳ ಬಗ್ಗೆ ಏನಾದರು ಚರ್ಚೆಯಾಗಿದೆ ಎಂದು ಸುದ್ದಿಗಾರರು ರೆಡ್ಡಿ ಅವರನ್ನ ಪ್ರಶ್ನಿಸಿದ್ದರು. ವಿಶೇಷ ತನಿಖಾ ತಂಡಗಳು ಈ ಹಿಂದೆ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ತನಿಖೆ ನಡೆಸುತ್ತಿವೆ ಮತ್ತು ಆದ್ದರಿಂದ ಈ ವಿಷಯದ ಬಗ್ಗೆ ಹೆಚ್ಚಿನ ಚರ್ಚೆ ನಡೆದಿಲ್ಲ ಎಂದು ಸಚಿವರು ಹೇಳಿದರು. ಒಂದು ತಿಂಗಳೊಳಗೆ ತನಿಖೆ ಪೂರ್ಣಗೊಳಿಸುವಂತೆ ಎಸ್‌ಐಟಿ ಗೆ ಆದೇಶಿಸಲಾಗಿದೆ. 30 ದಿನಗಳಲ್ಲಿ 10 ದಿನ ಗಳು ಕಳೆದಿವೆ. ಹಾಗಾಗಿ ಸಾರ್ವಜನಿಕ ಕೆಲಸಗಳ ಬಗ್ಗೆ ಹೆಚ್ಚಿನ ಚರ್ಚೆಗಳು ನಡೆದಿಲ್ಲ.ಉತ್ತಮ ಕೆಲಸ ಮಾಡಿದ ಗುತ್ತಿಗೆದಾರರ ಬಿಲ್ಗಳನ್ನು ಮಾತ್ರ ತೆರವುಗೊಳಿಸಲಾಗುವುದು ಎಂದು ಸಚಿವರು ಹೇಳಿದರು. ಲೋಕಸಭೆ ಚುನಾವಣೆ ಕುರಿತು ಯಾವುದೇ ಮಾತುಕತೆ ನಡೆದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಾಸ್ತವವಾಗಿ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ಗೆ ಸಂಬಂಧಿಸಿದಂತೆ ಚರ್ಚೆಗಳು ನಡೆದಿವೆ. ಅದು ಡಿಸೆಂಬರ್ ನಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ಸಚಿವರು ಹೇಳಿದರು. ಶಕ್ತಿ ಯೋಜನೆ ಇನ್ನೂ 10 ವರ್ಷ ಉಳಿದಿದೆ. ಮಹಿಳೆಯರು ಪಾಸ್ ಖರೀದಿಸುವ ಅಗತ್ಯವಿಲ್ಲ. ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಕಿಡಿಕಾರಲು ಯತ್ನಿಸುತ್ತಿದ್ದಾರೆ. ಶಕ್ತಿ ಯೋಜನೆಯಲ್ಲಿ ಹೆಣ್ಣು ಮಕ್ಕಳು ಹೆಚ್ಚಾಗಿ ಓಡಾಡುತ್ತಿರುವ ಕಾರಣ ಬಸ್ ಗಳಲ್ಲಿ ರಶ್ ಜಾಸ್ತಿ ಆಗಿ ಜನರಿಗೆ ತೊಂದರೆಯಾಗುತ್ತಿರುವ ಕಾರಣ ಈಗ ರಾಜ್ಯದಲ್ಲಿ ಹೆಚ್ಚು ಬಸ್‌ಗಳ ಸಂಚಾರ ಹೆಚ್ಚಿಗೆ ಆಗ ಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಸರ್ಕಾರ ಕೂಡ ಇದಕ್ಕೆ ಒಪ್ಪಿಗೆ ಕೊಟ್ಟಿದ್ದು, ರಾಜ್ಯಕ್ಕೆ ಹೊಸದಾಗಿ 4000 ಬಸ್‌ಗಳು ಬರಬಹುದು ಎಂದು ಹೇಳಲಾಗುತ್ತಿದೆ. ಇದರಿಂದ ಹೊಸದಾಗಿ ಉದ್ಯೋಗದ ಅವಕಾಶ ಕೂಡ ಶುರುವಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *