ವಸಂತ ಕಾಲದಲ್ಲಿ ಸಿಗುವಂತಹ ಹಲಸಿನ ಹಣ್ಣು ಗ್ರಾಮೀಣ ಭಾಗದ ಜನರ ಪ್ರಿಯವಾದ ಹಣ್ಣು. ಇದರಲ್ಲಿ ಹಲವಾರು ರೀತಿಯ ಆರೋಗ್ಯ ಲಾಭಗಳು ಇವೆ. ಅದನ್ನು ತಿಳಿಯಿರಿ. ಹಲಸಿನ ಹಣ್ಣು ಎಂದರೆ ಅದು ಸುವಾಸನೆ ಹಾಗೂ ರುಚಿ ಎರಡನ್ನೂ ಹೊಂದಿದೆ. ಈ ಹಣ್ಣನ್ನು ಬಳಸಿಕೊಂಡು ವಿವಿಧ ರೀತಿಯ ಖಾದ್ಯಗಳನ್ನು ಕೂಡ ತಯಾರಿಸುವರು. ಅದೇ ರೀತಿಯಾಗಿ ಹಲಸಿನ ಹಣ್ಣನ್ನು ಹಾಗೆ ತಿನ್ನಬಹುದು. ಇದು ಬೇಸಗೆಯಲ್ಲಿ ಹೆಚ್ಚಾಗಿ ಬೆಳೆಯುವ ಕಾರಣದಿಂದಾಗಿ ಆರೋಗ್ಯಕ್ಕೂ ಒಳ್ಳೆಯದು ಎಂದು ಹೇಳಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಇಂದಿಗೂ ಹಲಸಿನ ಹಣ್ಣನ್ನು ಯಥೇಚ್ಛವಾಗಿ ಬಳಸುವರು. ಇದರಿಂದ ಹಪ್ಪಳ, ತಿಂಡಿ, ದೋಸೆ ಹಾಗೂ ಇತ್ಯಾದಿ ತಿಂಡಿ ತಿನಿಸುಗಳನ್ನು ಬಳಸುವರು. ಪ್ರಕೃತಿದತ್ತವಾಗಿ ಸಿಗುವಂತಹ ಈ ಹಣ್ಣಿನಲ್ಲಿ ಹಲವಾರು ರೀತಿಯ ವಿಟಮಿನ್ ಗಳು ಹಾಗೂ ಖನಿಜಾಂಶಗಳು ಇವೆ. ವಿಟಮಿನ್ ಬಿ, ಪೊಟಾಶಿಯಂ ಮತ್ತು ಪ್ರೋಟೀನ್ ಇದರಲ್ಲಿ ಸಮೃದ್ಧವಾಗಿದೆ. ಇದರಲ್ಲಿನ ಇತರ ಕೆಲವೊಂದು ಪೋಷಕಾಂಶಗಳು ಈ ಹಣ್ಣನ್ನು ಆರೋಗ್ಯಕ್ಕೆ ಉತ್ತಮವೆಂದು ಪರಿಗಣಿಸುವಂತೆ ಮಾಡಿದೆ. ಇಲ್ಲಿ ಹಲಸಿನ ಹಣ್ಣಿನ ಆರೋಗ್ಯ ಲಾಭಗಳ ಬಗ್ಗೆ ತಿಳಿಯುವ.

ಖನಿಜಾಂಶ, ವಿಟಮಿನ್ ಗಳು ಮತ್ತು ಆಹಾರದ ನಾರಿನಾಂಶ ಹೊಂದಿರುವಂತಹ ಹಲಸಿನ ಹಣ್ಣು ನೈಸರ್ಗಿಕ ವಿರೇಚಕ ಗುಣ ಹೊಂದಿದೆ ಮತ್ತು ಇದು ಜೀರ್ಣಕ್ರಿಯೆ ವ್ಯವಸ್ಥೆಯ ಸಮಸ್ಯೆಯನ್ನು ದೂರ ಮಾಡುವುದು. ವಿಟಮಿನ್ ಎ ಒಳಗೊಂಡಿರುವ ಹಲಸಿನ ಹಣ್ಣು ಕಣ್ಣಿಗೆ ಕೂಡ ಒಳ್ಳೆಯದು. ಹಲಸಿನ ಹಣ್ಣಿನಲ್ಲಿ ಕೊಲೆಸ್ಟ್ರಾಲ್ ಮತ್ತು ಅನಾರೋಗ್ಯಕರ ಕೊಬ್ಬು ಇಲ್ಲದಿರುವುದು ಇದರ ಮತ್ತೊಂದು ಗುಣವಾಗಿದೆ. ವಿಟಮಿನ್ ಬಿಯಿಂದ ಸಮೃದ್ಧವಾಗಿರುವ ಇದರಲ್ಲಿ ನಿಯಾಸಿನ್, ಪಿರಿಡಾಕ್ಸಿನ್, ರಿಬೋಫ್ಲಾವಿನ್ ಮತ್ತು ಫೋಲಿಕ್ ಆಮ್ಲವಿದೆ. ವಿಟಮಿನ್ ಸಿ ಕೂಡ ಇರುವ ಇದು ಪ್ರತಿರೋಧಕ ವ್ಯವಸ್ಥೆ ಬಲಪಡಿಸುವಲ್ಲಿ ತುಂಬಾ ಸಹಕಾರಿ ಆಗಿರುವುದು. ಹಲಸಿನ ಹಣ್ಣಿನಿಂದ ಸಿಗುವ ಆರೋಗ್ಯ ಲಾಭಗಳ ಬಗ್ಗೆ ತಿಳಿಯಿರಿ.

ಹಲಸಿನ ಹಣ್ಣಿನಲ್ಲಿ ಲಿಗ್ನಾನ್ಸ್, ಐಸೊಫ್ಲಾವೊನ್ ಮತ್ತು ಸಪೋನಿನ್ ಗಳಂತಹ ಹಲವಾರು ರಿತಿಯ ಪೈಥೋ ಕೆಮಿಕಲ್ ಗಳು ಇವೆ. ಇದೆಲ್ಲವೂ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ ಎಂದು ಹೇಳಲಾಗುತ್ತದೆ. ಹಲಸಿನ ಹಣ್ಣಿನಲ್ಲಿ ಇರುವಂತಹ ಆಂಟಿಆಕ್ಸಿಡೆಂಟ್ ಫ್ರೀ ರ್ಯಾಡಿಕಲ್ ನ್ನು ತಟಸ್ಥಗೊಳಿಸುವುದು ಮತ್ತು ಕೆಲವು ಕ್ಯಾನ್ಸರ್ ನ್ನು ಇದು ತಡೆಯುವುದು. ಹಲಸಿನ ಹಣ್ಣಿನಲ್ಲಿ ಇರುವಂತಹ ಲ್ಯಾಕ್ಟಿನ್ ಎನ್ನುವ ಅಂಶವು ಗರ್ಭಕೋಶದ ಕ್ಯಾನ್ಸರ್ ವಿರುದ್ಧ ಹೋರಾಡುವುದು ಎಂದು ಅಧ್ಯಯನವು ಹೇಳಿವೆ. ಇದರಲ್ಲಿ ಇರುವಂತಹ ಆಹಾರದ ನಾರಿನಾಂಶವು ಹೊಟ್ಟೆ, ಅನ್ನನಾಳದಂತಹ ಕ್ಯಾನ್ಸರ್ ನ್ನು ತಡೆಯುವುದು.ಬೊಜ್ಜು ದೇಹಿಗಳ ಸಂಖ್ಯೆಯು ದಿನೇ ದಿನೇ ಹೆಚ್ಚುತ್ತಲಿದೆ. ಇದಕ್ಕಾಗಿ ನೈಸರ್ಗಿಕವಾಗಿ ಸಿಗುವಂತಹ ಹಲಸಿನ ಹಣ್ಣು ತಿಂದರೆ ತುಂಬಾ ಒಳ್ಳೆಯದು. ಇದು ಕೊಬ್ಬು ರಹಿತವಾಗಿದೆ ಮತ್ತು ಕೊಲೆಸ್ಟ್ರಾಲ್ ತುಂಬಾ ಕಡಿಮೆ ಇದೆ. ಇದನ್ನು ತಿಂದರೆ ಅದರಿಂದ ಇತರ ಹಲವಾರು ರೀತಿಯ ಲಾಭಗಳು ಕೂಡ ದೇಹಕ್ಕೆ ಲಭ್ಯವಾಗುವುದು.

Leave a Reply

Your email address will not be published. Required fields are marked *