ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ಮಾರಕ ಕ್ಯಾನ್ಸರ್ ರೋಗದಿಂದಲೂ ನಾವು ದೂರವಿರಬಹುದು ಎಂದು ವೈದ್ಯರು ಹೇಳಿದ್ದಾರೆ. ಕೇವಲ ಇದು ಮಾತ್ರವಲ್ಲದೇ ಅಜೀರ್ಣ, ಬೊಜ್ಜಿನ ಸಮಸ್ಯೆ ಕೂಡ ಇದರಿಂದ ಬಗೆಹರಿಯುತ್ತದೆ. ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಮುಖ ಪ್ರಯೋಜನಗಳ ಇಲ್ಲಿವೆ ನೋಡಿ.

ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸುತ್ತದೆ: ಊಟದ ಬಳಿಕ ಅಥವಾ ಇತರೆ ಸಂದರ್ಭಗಳಲ್ಲಿ ತಾಮ್ರದ ಚೊಂಬು ಅಥವಾ ತಾಮ್ರದ ಲೋಟಗಳಲ್ಲಿ ನೀರು ಕುಡಿಯುವುದರಿಂದ ಅದರಲ್ಲಿನ ಅಂಶಗಳು ಕೆಟ್ಟ ಬ್ಯಾಕ್ಟೀರಿಯಾಗಳನ್ನು ನಾಶ ಮಾಡುತ್ತದೆ.ಆ ಮೂಲಕ ದೇಹದ ಜೀರ್ಣ ಕ್ರಿಯೆಯನ್ನು ಇದು ಉತ್ತಮಪಡಿಸುತ್ತದೆ.

ಬೊಜ್ಜಿನ ಸಮಸ್ಯೆಯಿಂದ ಮುಕ್ತಿ: ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಅಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ. ನೀರಿನಲ್ಲಿರುವ ತಾಮ್ರದ ಅಂಶ ದೇಹದ ಜೀರ್ಣ ಕ್ರಿಯೆಯನ್ನು ಉತ್ತಮಗೊಳಿಸಿ ಬೊಜ್ಜು ಶೇಖರಣೆಯಾಗದಂತೆ ತಡೆಯುತ್ತದೆ. ಆ ಮೂಲಕ ಆಧಿಕ ಬೊಜ್ಜು ಕೂಡ ನಿಯಂತ್ರಣಕ್ಕೆ ಬರುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ: ಹಿಂದಿನ ಕಾಲದಲ್ಲಿ ಈಗಿನ ಸ್ಟೀಲ್ ನಾಣ್ಯಗಳ ಬದಲಿಗೆ ತಾಮ್ರ ಮತ್ತು ಚಿನ್ನದ ನಾಣ್ಯಗಳು ಚಾಲ್ತಿಯಲ್ಲಿದ್ದವು. ತಾಮ್ರ ಮತ್ತು ಚಿನ್ನ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂದು ತಿಳಿದಿದ್ದ ಅಂದಿನ ವೈದ್ಯರು ಮತ್ತು ಧರ್ಮ ಪ್ರಚಾರಕರು ದೇವಾಲಯಗಳ ಕಲ್ಯಾಣಿ ಹಾಗೂ ಪವಿತ್ರ ನದಿಗಳಲ್ಲಿ ನಾಣ್ಯವನ್ನು ಹಾಕಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಹೇಳುತ್ತಿದ್ದರು. ಆ ಮೂಲಕ ಕಲ್ಯಾಣಿಯ ನೀರು ಮತ್ತು ನದಿಯ ನೀರು ಕುಡಿಯುವ ಮಂದಿ ಯಾವುದೇ ರೋಗಗಳಿಗೆ ತುತ್ತಾಗುವುದಿಲ್ಲ ಎಂಬುದು ಅವರ ಭಾವನೆಯಾಗಿತ್ತು.

ವಯಸ್ಸನ್ನು ಮರೆಮಾಚುತ್ತದೆ: ತಾಮ್ರದಲ್ಲಿ ಆ್ಯಂಟಿ ಆಕ್ಸಿಂಡೆಂಟ್ ಅಂಶ ಯಥೇಚ್ಛವಾಗಿದ್ದು, ಇದು ದೇಹದ ಅನಾವಶ್ಯಕ ಬೊಜ್ಜಿನ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ಮಾಡುತ್ತದೆ. ದೇಹ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ತೊಡೆದು ಹಾಕುವ ಶಕ್ತಿ ತಾಮ್ರಕ್ಕೆ ಇದ್ದು, ನಿರ್ಜೀವ ಜೀವಕೋಶಗಳನ್ನು ತೊಡೆದುಹಾಕಿ ಹೊಸ ಜೀವಕೋಶಗಳ ಬೆಳವಣಿಗೆಗೆ ಸಹಕಾರಿಯಾಗುತ್ತದೆ.

ಹೃದಯದ ಆರೋಗ್ಯ ಮತ್ತು ಅಧಿಕ ರಕ್ತದೊತ್ತಡ ನಿಯಂತ್ರಿಸುತ್ತದೆ: ತಾಮ್ರದ ಅಂಶ ಹೃದಯಸಂಬಂಧಿ ರೋಗಗಳನ್ನು ದೂರವಿಡುತ್ತದೆ. ಅಧಿಕ ಬೊಜ್ಜು ನಿಯಂತ್ರಣದ ಮೂಲಕ ಮತ್ತು ಹೃದಯದ ರಕ್ತನಾಳಗಳ ಶುದ್ದೀಕರಣದ ಮೂಲತ ಹೃದಯ ಆರೋಗ್ಯವಾಗಿರುವಂತೆ ತಾಮ್ರದ ಅಂಶ ನೋಡಿಕೊಳ್ಳುತ್ತದೆ.

ಮಾರಕ ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ: ತಾಮ್ರದಲ್ಲಿನ ಆ್ಯಂಟಿ ಆಕ್ಸಿಡೆಂಟ್ ಅಂಶ ಮಾರಕ ಕ್ಯಾನ್ಸರ್ ರೋಗವನ್ನು ನಿಯಂತ್ರಿಸಲು ಸಹಕಾರಿಯಾಗುತ್ತದೆ. ಮತ್ತು ಭವಿಷ್ಯದಲ್ಲಿ ಕ್ಯಾನ್ಸರ್ ರೋಗ ಬರದಂತೆಯೂ ಇದು ತಡೆಯುತ್ತದೆ.

ಥೈರಾಯ್ಡ್ ಉಪಶಮನದಲ್ಲಿ ಪರಿಣಾಮಕಾರಿ: ಥೈರಾಯ್ಡ್ ಸಮಸ್ಯೆಗೆ ಪ್ರಮುಖ ಕಾರಣ ತಿನ್ನುವ ಆಹಾರದಲ್ಲಿ ತಾಮ್ರದ ಅಂಶದ ಕೊರತೆ ಎಂದು ವೈದ್ಯರು ಹೇಳುತ್ತಾರೆ. ಹೀಗಾಗಿ ನಾವು ನಿತ್ಯ ತಾಮ್ರದ ಲೋಟದಲ್ಲಿ ನೀರು ಕುಡಿಯುವುದರಿಂದ ದೇಹಕ್ಕೆ ಅಗತ್ಯವಾದ ತಾಮ್ರದ ಅಂಶ ಸೇರುತ್ತದೆ. ಇದು ಥೈರಾಯ್ಡ್ ಸಮಸ್ಯೆ ಪರಿಹರಿಸಲು ನೆರವಾಗುತ್ತದೆ.

ಚರ್ಮರೋಗ ಸಮಸ್ಯೆಯಲ್ಲೂ ಪರಿಣಾಮಕಾರಿ: ತಾಮ್ರದಲ್ಲಿರುವ ಅಂಶಗಳು ಮಾನವನ ಚರ್ಮಕ್ಕೆ ಯಾವುದೇ ರೀತಿಯ ಸಮಸ್ಯೆ ಕಾಡದಂತೆ ತಡೆಯುತ್ತದೆ. ಅಂತೆಯೇ ಸಂಧಿವಾತ ಮತ್ತು ಸಂಧಿನೋವಿನಲ್ಲೂ ಇದು ಪರಿಣಾಮಕಾರಿಯಾಗಬಲ್ಲದು.

ರಕ್ತ ಹೀನತೆ ಸಮಸ್ಯೆ ದೂರ: ಹೃದಯ ಆರೋಗ್ಯದಲ್ಲೂ ತಾಮ್ರ ಪರಿಣಾಮಕಾರಿಯಾಗಿದ್ದು, ಹೃದಯ ನಾಳಗಳು ಸದಾಕಾಲ ಚಟುವಟಿಕೆಯಿಂದ ನೋಡಿಕೊಳ್ಳುತ್ತದೆ. ಆ ಮೂಲಕ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರಕ್ತ ಪರಿಚಲನೆಯಾಗುವಂತೆ ನೋಡಿಕೊಳ್ಳುತ್ತದೆ. ಇದರಿಂದ ರಕ್ತ ಹೀನತೆ ಸಮಸ್ಯೆ ಕೂಡ ದೂರಾಗುತ್ತದೆ.

Leave a Reply

Your email address will not be published. Required fields are marked *