ಹೌದು ಸರ್ವ ರೋಗಕ್ಕೂ ಸಾರಾಯಿ ಮದ್ದು ಅನ್ನೋದು ಗ್ರಾಮೀಣ ಪ್ರದೇಶದಲ್ಲಿ ಇರುವ ವಾಡಿಕೆಯ ಮಾತಾಗಿದೆ ಆದ್ರೆ ಅಮೃತಬಳ್ಳಿಯ ಔಷಧೀಯಗುಣಗಳನ್ನು ನೋಡಿದ್ರೆ ಈ ಬಳ್ಳಿಯೇ ಸರ್ವ ರೋಗಕ್ಕೂ ಮದ್ದು ಅಂತ ಹೇಳಬಹುದು.

ಎಲ್ಲಾ ಬಗೆಯ ಜ್ವರಗಳಲ್ಲಿಯೂ ಅಮೃತಬಳ್ಳಿಯು ಉತ್ತಮ ಔಷಧಿಯಾಗಿ ಕೆಲಸ ಮಾಡುತ್ತದೆ. ಮಧುಮೇಹ ರೋಗಕ್ಕೆ ಔಷಧಿಯಾಗಿ ಬಳಸುತ್ತಾರೆ. ಅದರ ತಜಾ ಕಾಂಡವನ್ನು ಜಜ್ಜಿ , ಹಿಸುಕಿ ರಸ ತೆಗೆದು 2 ಚಮಚೆ ರಸವನ್ನು ಜೇನು ತುಪ್ಪದೊಂದಿಗೆ ಬೆರೆಸಿ ದಿನಕ್ಕ್ಕೆ 3 ಬಾರಿ ಆಹಾರ ಸೇವನೆಯ ಮುಂಚೆ ಕುಡಿಯ ಬೇಕು.

ಬಾಯಾರಿಕೆ, ವಾಂತಿ, ವಾಕರಿಕೆ: ಸುಮಾರು 25 ಗ್ರಾಂನಷ್ಟು ಅಮೃತಬಳ್ಳಿಯನ್ನು ಅರೆದು ಶುದ್ಧವಾದ ನೀರು ಹಾಕಿ ಕಾಯಿಸಿ ಕಷಾಯ ಮಾಡಿಟ್ಟುಕೊಳ್ಳುವುದು. ದಿನಕ್ಕೆ ಮೂರು ವೇಳೆ ಸ್ವಲ್ಪ ಜೇನುತುಪ್ಪ ಸೇರಿಸಿ ಕುಡಿಯುವುದು.

ಮೂತ್ರನಾಳದಲ್ಲಿ ಕಲ್ಲು: ಅಮೃತಬಳ್ಳಿ, ನೆಗ್ಗಿಲು, ಅಶ್ವಗಂಧ, ನೆಲ್ಲಿ, ಶುಂಠಿಯ ಸಮತೂಕ ನಯವಾಗಿ ಚೂರ್ಣ ಮಾಡಿಟ್ಟುಕೊಳ್ಳುವುದು. 10ಗ್ರಾಂನಷ್ಟು ಚೂರ್ಣವನ್ನು ಶುದ್ಧ ನೀರು ಹಾಕಿ ಕಷಾಯ ಮಾಡಿ ವೇಳೆಗೆ ಒಂದು ಟೀ ಚಮಚದಷ್ಟು ಕುಡಿಸುವುದು.

ಮೈಮೇಲೇಳುವ ಪಿತ್ತದ ಗಂಧೆಗಳು: ಅಮೃತಬಳ್ಳಿಯ ಎಲೆ ಸಾಸಿವೆ ಶ್ರೀಗಂಧದ ಚಕ್ಕೆ ಇವುಗಳ ಸಮತೂಕವನ್ನು ಎಮ್ಮೆಯ ಹಾಲಿನಲ್ಲಿ ಅರೆದು ಮೈಗೆ ಹಚ್ಚುವುದು. ಪಿತ್ತ ವಿಕಾರ ಕಡಿಮೆ ಆಗಿ ಪಿತ್ತದ ಗಂಧೆಗಳು ಮತ್ತು ನೆವೆ ಉರಿ ಶಮನವಾಗುವುದು.

ಹೊಟ್ಟೆ ಉರಿ: ಹಸಿಸೊಪ್ಪಿನ ರಸ 2 ಟೀ ಚಮಚದಷ್ಟು ಸ್ವಲ್ಪ ಓಂಪುಡಿ ಸೇರಿಸಿ ಮಜ್ಜಿಗೆಯಲ್ಲಿ ಕದಡಿ ಕುಡಿಯುವುದು.

ವಾತ ಜ್ವರದಲ್ಲಿ: ಅಮೃತಬಳ್ಳಿ ತ್ರಫಲ ಚೂರ್ಣ, ತುಂಗೇಗುಡ್ಡೆ ಕೊತ್ತಂಬರಿ, ಶತಾವರಿ, ಕಳ್ಳಂಗಡಲೆ ಮತ್ತು ಬೇಲದ ಬೇರು ಇವುಗಳ ಸಮತೂಕದಷ್ಟನ್ನು ಚೆನ್ನಾಗಿ ಒಣಗಿಸಿ ಪುಡಿ ಮಾಡಿಟ್ಟುಕೊಳ್ಳುವುದು. ಸ್ವಲ್ಪ ಚೂರ್ಣಕ್ಕೆ ಎರಡು ಬಟ್ಟಲು ನೀರು ಹಾಕಿ ಕಾಯಿಸಿ ಅರ್ಧ ಬಟ್ಟಲು ಕಷಾಯವನ್ನು ಮಾಡಿ ಆರಿಸಿ ಕುಡಿಯುವುದು.

ಬುದ್ಧಿ ಭ್ರಮಣೆಗೆ: ಹಸಿ ಅಮೃತಬಳ್ಳಿಯನ್ನು ತಂದು ತಣ್ಣನೆಯ ಹಾಲಿನಲ್ಲಿ ನುಣ್ಣನೆ ರುಬ್ಬಿ ತಲೆಗೆ ಪಟ್ಟು ಹಾಕುವುದು. ಒಂದೆರಡು ತಾಸುಗಳ ನಂತರ ಬಿಸಿ ನೀರಿನಿಂದ ಸ್ನಾನ ಮಾಡುವುದು.

ದೃಷ್ಟಿಮಾಂದ್ಯದಲ್ಲಿ: ಅಮೃತಬಳ್ಳಿ ತ್ರಿಫಲ ಚೂರ್ಣ, ಹಿಪ್ಪಲಿ ಸಮ ಪ್ರಮಾಣ ಸೇರಿಸಿ ಜಜ್ಜಿ ಕಷಾಯ ಮಾಡುವುದು. ಅರ್ಧ ಬಟ್ಟಲು ಕಷಾಯಕ್ಕೆ ಜೇನುತುಪ್ಪ ಸೇರಿಸಿ ಕುಡಿಯುವುದು.

ಬೊಜ್ಜು ಮತ್ತು ಕೊಬ್ಬು ಕಡಿಮೆ ಆಗಲು, ಆಯಸ್ಸು ಹೆಚ್ಚಲು: ಇದು ಪರಿಣಾಮಕಾರಿ ಔಷಧಿ. ಮೇಲಿನ ಕಷಾಯಕ್ಕೆ ಒಂದು ಗುಲಗಂಜಿಯಷ್ಟು ಲೋಹ ಭಸ್ಮವನ್ನು ಮತ್ತು ಟೀ ಚಮಚ ಜೇನು ತುಪ್ಪವನ್ನು ಕೂಡಿಸಿ ಸೇವಿಸುವುದು. ಸುಮಾರು 40 ದಿವಸ ಅರಳ ಅಂಗಸಾಧನೆ, ಕೊಬ್ಬು ರಹಿತ ಆಹಾರ, ತಣ್ಣೀರು ಸ್ನಾನ ಮತ್ತು ದೀರ್ಘ ನಡಿಗೆ ಅಭ್ಯಾಸ ಮಾಡಿಕೊಳ್ಳುವುದು.

ಸ್ತ್ರೀಯರ ರಕ್ತ ಪ್ರದರಕ್ಕೆ: 20ಗ್ರಾಂ ಹಸಿ ಅಮೃತಬಳ್ಳಿಯ ರಸಕ್ಕೆ ಒಂದು ಟೀ ಚಮಚದಷ್ಟು ಸಕ್ಕರೆ ಬೆರೆಸಿ ದಿವಸಕ್ಕೆ ಎರಡು ವೇಳೆ ಸೇವಿಸುವುದು.

ಉರಿ ಮೂತ್ರದಲ್ಲಿ: ಅಮೃತಬಳ್ಳಿ ನಯವಾದ ಚೂರ್ಣವನ್ನು ಹಸುವಿನ ಹಾಲಿನಲ್ಲಿ ಕದಡಿ ದಿವಸಕ್ಕೆ ಎರಡು ಬಾರಿ ಸೇವಿಸುವುದು ಅಥವಾ ಮಜ್ಜಿಗೆಯಲ್ಲಿ ತೆಗೆದುಕೊಳ್ಳುವುದು, ಪ್ರಮಾಣ ಒಂದು ಗ್ರಾಂ ಒಂದು ಭಾರಿ.

Leave a Reply

Your email address will not be published. Required fields are marked *