ಶ್ರೀ ಗುರು ರಾಘವೇಂದ್ರ ಸ್ವಾಮಿಗಳನ್ನು ಭಕ್ತರು ರಾಯರು, ಗುರುರಾಯರು, ಗುರುರಾಜರು ಎಂದು ಭಕ್ತಿಯಿಂದ ಭಕ್ತರು ಕರೆಯುತ್ತಾರೆ. ಹಿಂದು ಧರ್ಮದ ದೇವರುಗಳಲ್ಲಿ ಶ್ರೀ ಪ್ರಹ್ಲಾದ ರಾಯರ ಮೂರನೇ ಅವತಾರವೇ ಶ್ರೀ ರಾಘವೇಂದ್ರರು, ಎರಡನೆಯ ಅವತಾರವು ಶ್ರೀ ವ್ಯಾಸರಾಯರು ಎನ್ನುತ್ತಾರೆ.

ಹಿಂದೂ ಧರ್ಮದ ಬ್ರಾಹ್ಮಣ ಮಾಧ್ವ ಸಂನ್ಯಾಸಿಗಳಲ್ಲಿ ಪ್ರಮುಖರಲ್ಲಿ ಶ್ರೀ ಗುರು ರಾಘವೇಂದ್ರ ಸ್ವಾಮಿಗಳು (೧೫೯೫-೧೬೭೧), ಅವರು ಮಧ್ವಾಚಾರ್ಯರ ಅನುಯಾಯಿಯಾಗಿ ಮಧ್ವ ಮತದ ದ್ವೈತ ಸಿದ್ಧಾಂತವನ್ನು ಪ್ರತಿಪಾದಿಸಿದ್ದಾರೆ. ಶ್ರೀ ಗುರು ರಾಘವೇಂದ್ರ ಸ್ವಾಮಿಗಳು ಮೂಲ ಬೃಂದಾವನವು (ಸಶರೀರ) ಈಗಿನ ಆಂಧ್ರ ಪ್ರದೇಶದ ತುಂಗಭದ್ರಾ ನದಿ ತಟದಲ್ಲಿರುವ ಮಂತ್ರಾಲಯದಲ್ಲಿದೆ. ಶ್ರೀ ಗುರು ರಾಘ ವೇಂದ್ರ ಸ್ವಾಮಿಗಳ ಪೂರ್ವಾಶ್ರಮದ ಹೆಸರು ವೆಂಕಟನಾಥ. ಇವರ ತಂದೆಯ ಹೆಸರು ತಿಮ್ಮಣ್ಣ ಭಟ್ಟ. ತಾಯಿಯ ಹೆಸರು ಗೋಪಿಕಾಂಬ. ತಿಮ್ಮಣ್ಣ ಭಟ್ಟರ ತಾತನ ಹೆಸರು ಕೃಷ್ಣ ಭಟ್ಟ. ಕೃಷ್ಣ ಭಟ್ಟರು ವೀಣೆಯಲ್ಲಿ ಪಂಡಿತರು.

ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ತಾತ ಕೃಷ್ಣ ಭಟ್ಟರು ವಿಜಯನಗರದ ರಾಜನಾದ ಕೃಷ್ಣದೇವರಾಯನಿಗೆ ವೀಣೆ ಕಲಿಸಿದ ಗುರುಗಳು. ತಿಮ್ಮಣ್ಣ ಭಟ್ಟರಿಗೆ ವೆಂಕಟನಾಥನನ್ನು ಬಿಟ್ಟು ಇನ್ನೂ ಇಬ್ಬರು ಮಕ್ಕಳು. ಗುರುರಾಜ ಮತ್ತು ವೆಂಕಟಾಂಬ ಅವರ ಹೆಸರು. ವೆಂಕಟನಾಥನು ೧೫೯೫ ರಲ್ಲಿ ಈಗಿನ ತಮಿಳುನಾಡುವಿನ ಭುವನಗಿರಿ ಎಂಬಲ್ಲಿ ಜನಿಸಿದನು.

ರಾಯರ ಪವಾಡಗಳು: ರಾಘವೇಂದ್ರ ಸ್ವಾಮಿಗಳಲ್ಲಿ ಅನೇಕ ವಿದ್ದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಅವರಲ್ಲೊಬ್ಬ ಬಡ ವಿದ್ದ್ಯಾರ್ಥಿ ತನ್ನ ವಿದ್ಯಾಭ್ಯಾಸ ಮುಗಿಸಿ ಹೊರಡುವಾಗ ರಾಯರಲ್ಲಿ ಬಂದು, ತನ್ನ ಬಡತನದ ಕಷ್ಟವನ್ನು ಅವರ ಬಳಿ ತೋಡಿಕೊಂಡು ತನ್ನನ್ನು ಅನುಗ್ರಹಿಸಬೇಕೆಂದು ಕೇಳಿಕೊಂಡನು.

ಸ್ನಾನದ ಸಮಯದಲ್ಲಿದ್ದ ರಾಯರು ತಮ್ಮ ಬಳಿ ಕೊಡಲು ಏನೂ ಇಲ್ಲವೆಂದರು. ಆಗ ತಾವು ಏನು ಕೊಟ್ಟರು ನನಗೆ ಮಹಾ ಪ್ರಸಾದವೆಂದು ಒಂದು ಹಿಡಿ ಮಂತ್ರಾಕ್ಷತೆಯನ್ನದರು ತಮ್ಮ ಕೈಯಿಂದ ದಯಪಾಲಿಸಬೇಕೆಂದು ಭಕ್ತಿಯಿಂದ ಬೇಡಿದನು. ಅದಕ್ಕವರು ಅವನಿಗೆ ಮಂತ್ರಾಕ್ಷತೆ ಕೊಟ್ಟರು. ಮಂತ್ರಾಕ್ಷತೆಯನ್ನೆ ವಿದ್ದ್ಯಾರ್ಥಿಯು ಮಹಾ ಪ್ರಸಾದ ವೆಂದು ಸ್ವೀಕರಿಸಿ ತನ್ನ ಊರಿನ ಕಡೆಗೆ ಹೊರಟನು.

ದಾರಿಯಲ್ಲಿ ಕತ್ತಲಾಗಿದ್ದರಿಂದ ಒಂದು ಮನೆಯ ಜಗಲಿಯ ಮೇಲೆ ಮನೆಮಾಲಿಕರಲ್ಲಿ ಅಪ್ಪಣೆ ಪಡೆದು ಮಲಗಿದನು. ಆ ಸಮಯದಲ್ಲಿ ಮನೆಯ ಮಾಲಿಕನ ಹೆಂಡತಿ ಗರ್ಭಿಣಿಯಾಗಿದ್ದಳು. ಮಧ್ಯರಾತ್ರಿಯಲ್ಲಿ ಒಂದು ಪಿಶಾಚಿಯು ಆ ಮನೆಯೊಳಗೆ ಹೋಗಿ, ಹುಟ್ಟಲಿರುವ ಮಗುವನ್ನು ಕೊಲ್ಲಬೇಕೆಂದು ಅಲ್ಲಿಗೆ ಬಂದಿತು. ಆದರೆ ಜಗಲಿಯಲ್ಲಿ ಮಲಗಿದ ಭಕ್ತನ ಬಳಿಯಿರುವ ಮಂತ್ರಾಕ್ಷತೆ ದಾಟಲು ಪ್ರಯತ್ನಿಸಿದಾಗ ಮಂತ್ರಾಕ್ಷತೆ ಬೆಂಕಿಯಂತೆ ಕಂಡು ಬಂದಿತು. ಇದರಿಂದ ಗಾಬರಿಗೊಂಡ ಪಿಶಾಚಿಯು ಭಕ್ತನನ್ನು ನೋಡಿ ಮಂತ್ರಾಕ್ಷತೆ ದೂರ ಎಸೆಯಲು ಹೇಳಿತು. ಪಿಶಾಚಿಯನ್ನು ನೋಡಿ ಹೆದರಿದ ಭಕ್ತನು ಮಂತ್ರಾಕ್ಷತೆಯನ್ನು ಅದರ ಮೇಲೆ ಎಸೆದನು. ಮಂತ್ರಾಕ್ಷತೆಯ ಪ್ರಭಾವದಿಂದ ಪಿಶಾಚಿಯು ಚೀರುತ್ತಾ ಅಲ್ಲೆ ಸುಟ್ಟು ಬೂದಿಯಾಯಿತು.

ಚಮತ್ಕಾರವನ್ನು ಕೇಳಿದ ಮನೆ ಮಂದಿಯಲ್ಲ ಹೊರಗೆ ಬಂದು ಅವಕ್ಕಾದರು. ಅಷ್ಟರಲ್ಲೆ ಮನೆಯೊಡತಿಗೆ ಮಗುವಾದ ಸಂತಸದ ಸುದ್ದಿ ತಿಳಿಯಿತು. ರಾಯರು ಕೊಟ್ಟ ಮಂತ್ರಾಕ್ಷತೆಯ ಶಕ್ತಿಯಿಂದ ದುಷ್ಟ ಶಕ್ತಿಯ ನಾಶವಾಯಿತು. ರಾಯರನ್ನು ನೆನೆಯುವ ಭಕ್ತರು ಹೆಚ್ಚಾಗಿದ್ದಾರೆ ಈಗ ಅವರ ಪವಾಡಗಳು ಬಹಳ ಅದ್ಬುತವಾಗಿವೆ.

Leave a Reply

Your email address will not be published. Required fields are marked *