ಎಲ್ಲರಿಗೂ ನಮಸ್ಕಾರ, ಸ್ನೇಹಿತರೆ ಹೊಸ ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ಬಿಪಿಎಲ್ ಪಡಿತರ ಚೀಟಿ ಕೋರಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಶೀಘ್ರ ದಲ್ಲಿ ಅವಕಾಶ ಕಲ್ಪಿಸಲು ಆಹಾರ ಇಲಾಖೆ ತೀರ್ಮಾನಿಸಿದೆ. ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕಾರಣದಿಂದಾಗಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ವಿತರಣೆ ಸ್ಥಗಿತಗೊಳಿಸಲಾಗಿತ್ತು. ವೆಬ್ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಕೆ ವಿಭಾಗವನ್ನ ಲಾಕ್ ಮಾಡಲಾಗಿತ್ತು. ಮುಂದಿನ ವಾರದಿಂದ ಅರ್ಜಿ ಸಲ್ಲಿಕೆ ಗೆ ಅವಕಾಶ ಕಲ್ಪಿಸಲು ತೆರೆಯಲಾಗುವುದು. ಬಿಪಿಎಲ್ ಕಾರ್ಡ್‌ಗಾಗಿ ಚುನಾವಣೆ ಗಿಂತ ಮೊದಲು 4,00,000 ಅರ್ಜಿ ಸಲ್ಲಿಕೆಯಾಗಿದ್ದು, ಇವುಗಳ ಪರಿಶೀಲನೆ ನಡೆಸಲಾಗುತ್ತಿದೆ.

ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಿದ್ದು, ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಲಭ್ಯವಿರುವ ಗಣಕೀಕರಣ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬೇಕು. ಹೊಸದಾಗಿ ಬಿಪಿಎಲ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಕಡ್ಡಾಯವಾಗಿದ್ದು, ಮನೆಯ ಯಜಮಾನಿಯ ಆದಾಯ ಪ್ರಮಾಣ ಪತ್ರ ಸಲ್ಲಿಸಬೇಕಿದೆ. ಕಾರ್ಡ್‌ನಲ್ಲಿ ಹೆಸರು ಸೇರ್ಪಡೆ ಗೆ ಆಧಾರ್ ನೊಂದಿಗೆ ಆದಾಯ ಪ್ರಮಾಣಪತ್ರ ನೀಡಬೇಕಿದ್ದು.ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆ ಗೆ ಮೊಬೈಲ್ ನಂಬರ್ ಜೋಡಣೆ ಆಗಿರುವ ಆಧಾರ್ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ಬೆಂಗಳೂರು, ಸೈಬರ್ ಸೆಂಟರ್‌ಗಳ ಲ್ಲಿ ಹೊಸ ಕಾರ್ಡ್ ಅಥವ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು.

ವೆಬ್ ಸೈಟ್ ನಲ್ಲಿ ಸ್ವಯಂವಾಗಿ ಅರ್ಜಿ ಸಲ್ಲಿಸ ಬಹುದು. ಎಪಿಎಲ್ ಕಾರ್ಡ್ ಪಡೆಯುವ ವರು ಕೂಡ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸ ಬೇಕಿದೆ. ಮುಂದಿನ ವಾರ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸ ಲು ಆನ್‌ಲೈನ್ ಸೇವೆ ಪುನರ್ ಆರಂಭಿಸ ಲಾಗುವುದು. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡ ಲಾಗುವುದು.ಮಾನದಂಡ ಗಳು ಕರ್ನಾಟಕದಲ್ಲಿ ಕಾಯಂ ನಿವಾಸಿಯಾಗಿರಬೇಕು. ರಾಜ್ಯದಲ್ಲಿ ಈಗಾಗಲೇ ಪಡಿತರ ಚೀಟಿ ಹೊಂದಿದ ಕುಟುಂಬಗಳು ಅರ್ಹ ರಾಗಿರುತ್ತಾರೆ. ಹೊಸದಾಗಿ ಮದುವೆಯಾದ ದಂಪತಿ, ಹೊಸ ಪಡಿತರ ಚೀಟಿ ಗೆ ಅರ್ಜಿ ಸಲ್ಲಿಸ ಬಹುದು. ದಿನಾಂಕ ಮುಗಿದ ತಾತ್ಕಾಲಿಕ ಪಡಿತರ ಚೀಟಿ ಹೊಂದಿರುವ ನಾಗರಿಕರು ಅರ್ಹರು.

ಕರ್ನಾಟಕದಲ್ಲಿ ಹೊಸ ಪಡಿತರ ಚೀಟಿ ನೀಡುವಿಕೆಯು ಮನೆಯ ಆದಾಯ ಮತ್ತು ಕುಟುಂಬದ ಆರ್ಥಿಕ ಪರಿಸ್ಥಿತಿಗಳನ್ನು ಆಧರಿಸಿದೆ ಎಂಬುದನ್ನು ಗಮನಿಸುವುದು ಮುಖ್ಯ ವಾಗಿದೆ.ಅಗತ್ಯ ದಾಖಲೆಗಳು ವೋಟರ್ ಐಡಿ ಡ್ರೈ ವಿಂಗ್ ಲೈಸನ್ಸ್, ಆಧಾರ್ ಕಾರ್ಡ್ ನಂತ ವಾಸಸ್ಥಳದ ಪುರಾವೆಗಳು ವಯಸ್ಸಿನ ಪ್ರಮಾಣ ಪತ್ರ, ಮತದಾರರ ಗುರುತಿನ ಪತ್ರ, ಡ್ರೈ ವಿಂಗ್ ಲೈಸನ್ಸ್, ಆಧಾರ್ ಕಾರ್ಡ್‌ನ ಗುರುತಿನ ಪುರಾವೆ, ಕುಟುಂಬದ ಆದಾಯ ಪ್ರಮಾಣ ಪತ್ರ ಅರ್ಜಿದಾರರ ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ ಅಥವಾ ಈಮೇಲ್ ಐಡಿ ವಾರ್ಡ್ ಕೌನ್ಸಿಲರ್ ಅಥವಾ ಪ್ರಧಾನಿ ನೀಡಿದ ಸ್ವಯಂ ಘೋಷಣೆ ಮತ್ತು ಪ್ರಮಾಣ ಪತ್ರ ಬೇಕು. ಆದರೆ ಇದೀಗ ಕರ್ನಾಟಕ ಸರಕಾರ ಯಾವುದೇ ರೀತಿಯಾದ ರೇಷನ್ ಕಾರ್ಡ್ ನೀಡಲಾಗುವುದಿಲ್ಲ ಎಂದು ತಿಳಿಸಿದೆ ಹಾಗಾಗಿ ಮುಂದಿನ ಆದೇಶದವರೆಗೆ ಕಾಯಬೇಕು.

Leave a Reply

Your email address will not be published. Required fields are marked *