ಹತ್ತನೇ ತರಗತಿ ಪಾಸಾಗಿರುವ ಅಭ್ಯರ್ಥಿಗಳಿಂದ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಈ ಮಾಹಿತಿಯನ್ನು ಪೂರ್ತಿ ವೀಕ್ಷಿಸಿ. ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ.

2A 2B ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ ಹದಿನೈದು ಸಾವಿರದಿಂದ ರೂಪಾಯಿ 78,900 ಐವತ್ತರ ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ. ಆಯ್ಕೆ ವಿಧಾನ, ಹತ್ತನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹300, ಪ್ರವರ್ಗ, ಎರಡು ಎ, ಎರಡು ಬಿ ಮೂರು ಎ, ಮೂರು ಬಿ ವರ್ಗದ ಅಭ್ಯರ್ಥಿಗಳು 150 ರೂ ಅರ್ಜಿ ಶುಲ್ಕ ಪಾವತಿಸಬೇಕು. ಎಸ್‌ಸಿ ಎಸ್‌ಟಿ ಪ್ರವರ್ಗ ಒಂದು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಶುಲ್ಕ ಪಾವತಿಸುವ ವಿಧಾನ, ಆನ್‌ಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ನೆಟ್ ಬ್ಯಾಂಕಿಂಗ್ ಹಾಗೂ ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. https://recruitmenthck.kar.nic.in/district/mdy/gdp/home.php ಹುದ್ದೆಯ ಹೆಸರು ಜವಾನ ಪಿಯೋನ್ ಹುದ್ದೆಗಳ ಸಂಖ್ಯೆ ಒಟ್ಟು 41 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು, ಬರೆಯಲು ತಿಳಿದಿರಬೇಕು.

10ನೇ ತರಗತಿಯ ಗರಿಷ್ಠ ಅಂಕಗಳನ್ನಾಧರಿಸಿ, ಒಂದು ಹುದ್ದೆಗೆ 10 ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

Leave a Reply

Your email address will not be published. Required fields are marked *