ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಅಗತ್ಯವಿರುವ ಡಿ ಗ್ರೂಪ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಈ ಮಾಹಿತಿಯನ್ನು ಪೂರ್ತಿ ವೀಕ್ಷಿಸಿ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ನೇಮಕಾತಿ ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ ಹದಿನೈದು ಸಾವಿರದಿಂದ ರೂಪಾಯಿ 20,900 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ. ವಯೋಮಿತಿ ಮಾರ್ಚ್ 2024 ಕ್ಕೆ ಅಭ್ಯರ್ಥಿಗಳು ಗರಿಷ್ಟ 55 ವರ್ಷ ಮೀರಿರಬಾರದು.

ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಬಿಎಂಪಿ ಅಧಿಕೃತ ವೆಬ್‌ಸೈಟ್ ವಿಳಾಸ ಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ನಂತರ ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು. ಅರ್ಜಿ ನಮೂನೆಯ ಲಿಂಕ್ bbmp.gov.in ಈ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸುವ ವಿಳಾಸ, ಸಂಬಂಧಪಟ್ಟ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಇವರ ಕಛೇರಿಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಶುಲ್ಕ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಹುದ್ದೆಯ ಹೆಸರು ಪೌರ ಕಾರ್ಮಿಕರು ಗ್ರೌಂಡ್ ಹುದ್ದೆಗಳ ಸಂಖ್ಯೆ ಒಟ್ಟು 11,307 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಕಲ್ಯಾಣ ಕರ್ನಾಟಕದಲ್ಲಿ 905 ಹುದ್ದೆ ಖಾಲಿ ಇದೆ. ಉದ್ಯೋಗ, ಸ್ಥಳ, ಬೆಂಗಳೂರು. ಹುದ್ದೆಗಳ ಸಂಖ್ಯೆ ಒಟ್ಟು 11,307 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.ಕನಿಷ್ಠ ಅರ್ಹತೆ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿ ಅಡಿಯಲ್ಲಿನ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ಹಾಲಿ ನೇರ ಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಆಧಾರದ ಮೇಲೆ ಕನಿಷ್ಠ ಎರಡು ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಸೇವೆಯನ್ನು ಸಲ್ಲಿಸಿರುವ ಹಾಗೂ ಸದರಿ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ ಕಾರ್ಯನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಕನ್ನಡ ಭಾಷೆ ಮಾತನಾಡಲು ತಿಳಿದಿರಬೇಕು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಡಿಯಲ್ಲಿನ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ಹಾಲಿ ನೇರಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ ಪೌರಕಾರ್ಮಿಕರು ಆಧಾರದ ಮೇಲೆ ಕನಿಷ್ಠ 2 ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಸೇವೆಯನ್ನು ಸಲ್ಲಿಸಿರುವ ಹಾಗೂ ಸದರಿ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ ಅಂದರೆ ದಿನಾಂಕ 02-03-2023 ಕಾರ್ಯ ನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

Leave a Reply

Your email address will not be published. Required fields are marked *