ಈಗಾಗಲೇ ನಮ್ಮ ರಾಜ್ಯದಲ್ಲಿ ಹಲವಾರು ಜನ ಬಿಪಿಎಲ್ ಕಾರ್ಡನಿಂದ ಸಮಸ್ಯೆಗಳನ್ನು ಎದುರಿಸುತ್ತಾ ಬರುತ್ತಿದ್ದಾರೆ. ಈ ಸಮಸ್ಯೆಯಿಂದ ಹೊರಬರಲು ಕರ್ನಾಟಕ ಸರ್ಕಾರ ಹಲವಾರು ದಾರಿಗಳನ್ನು ಕಂಡುಕೊಳ್ಳುತ್ತಾ ಬರುತ್ತಿದೆ. ಕರ್ನಾಟಕ ರಾಜ್ಯದಾದ್ಯಂತ ಬಿಪಿಎಲ್ ರೇಷನ್ ಕಾರ್ಡ್ ಇಲ್ಲದವರಿಗೆ ಗುಡ್‌ನ್ಯೂಸ್ ಎಂತವರಿಗೆ ಇನ್ನು ಮುಂದೆ ಇದೇ ಏಪ್ರಿಲ್ 1 ರಿಂದ ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಅರ್ಜಿಯನ್ನು ಸಲ್ಲಿಸಬಹುದು. ರಾಜ್ಯದಲ್ಲಿ ಹೊಸದಾಗಿ ಮದುವೆಯಾಗಿರುವ ನವಜೋಡಿಗಳಿಗೂ ಕೂಡ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ವಿತರಿಸಲು ನಿರ್ಧರಿಸಲಾಗಿದೆ ಮತ್ತು ಒಂದೇ ಕುಟುಂಬದಲ್ಲಿ ಮಗ ಮತ್ತು ಸೊಸೆ ಇರುವುದು ಅದನ್ನು ಬೇರ್ಪಡಿಸಿ ಅವರಿಗೂ ಕೂಡ ಪ್ರತ್ಯೇಕವಾಗಿ ಬಿಪಿಎಲ್ ಕಾರ್ಡ್ ಮಾಡಿಸಿಕೊಳ್ಳಲು ಬಯಸುವವರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಬಂಪರ್ ಗುಡ್ ನ್ಯೂಸ್ ನೀಡಿದೆ.

ಹಾಗಿದ್ರೆ ಇದೇ ಏಪ್ರಿಲ್ ಒಂದರಿಂದ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಹೊಸ ರೇಷನ್ ಕಾರ್ಡ್ ಪಡೆದುಕೊಳ್ಳಲು ಯಾವೆಲ್ಲ ದಾಖಲೆಗಳು ನಮ್ಮ ಬಳಿ ಇರಬೇಕು ಮತ್ತು ಹೇಗೆ ನಾವು ಹೊಸ ಬಿಪಿಎಲ್ ರೇಶನ್ ಕಾರ್ಡ್ ಮಾಡಿಸಿಕೊಳ್ಳಬಹುದು. ಇರುವ ಕಂಪ್ಲೇಂಟ್ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಎಪ್ರಿಲ್ ಒಂದರಿಂದ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು. ಸದ್ಯ ರಾಜ್ಯದಲ್ಲಿ ಪಡಿತರ ಚೀಟಿಗೆ ಸಂಬಂಧಪಟ್ಟಂತೆ ಹೊಸ ಹೊಸ ಅಪ್ ಡೇಟ್ ಹೊರಬಿದ್ದಿದೆ. ಜನಸಾಮಾನ್ಯರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಪಡಿತರ ಚೀಟಿಗಾಗಿ ಕಾಯುತ್ತಿದ್ದಾರೆ.

ಇನ್ನು ಮಾರ್ಚ್ 31 ರ ಒಳಗಡೆ ಎಲ್ಲ ಅರ್ಜಿಯನ್ನ ಪರಿಶೀಲಿಸಿ, ಏಪ್ರಿಲ್ 1 ರಿಂದ ಹೊಸ ಪಡಿತರ ವಿತರಣೆ ಮಾಡಲಾಗುತ್ತಿದೆ ಎಂದು ರಾಜ್ಯ ಆಹಾರ ಇಲಾಖೆ ಮಾಹಿತಿ ನೀಡಿದೆ. ಸದ್ಯ ಇದೀಗ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ದಿನಾಂಕದಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಬಹುದು. ಹೊಸ ‌ ‌ಪಡಿತರ ಚೀಟಿಗಾಗಿ ಬಂದಿರುವಂತಹ 2,95,000 ಅರ್ಜಿಗಳನ್ನು ಮಾರ್ಚ್ 31 ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಇದುವರೆಗೆ 57651 ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆಗಾಗಿ ಏಳ್ನೂರ ಎಪ್ಪತ್ತನಾಲ್ಕು ಕಾರ್ಡ್‌ಗಳನ್ನು ವಿತರಿಸಲಾಗಿದೆ. ಬಾಕಿ ಉಳಿದಿರುವ ಹೊಸ ಆದ್ಯತಾ ಪಡಿತರ ಚೀಟಿಯನ್ನು ಪರಿಶೀಲಿಸಿ ವಿಲೇವಾರಿ ಮಾಡುವಂತೆ ಜಂಟಿ ಅಥವಾ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಅರ್ಜಿಗಳು ಸಲ್ಲಿಕೆಯಾಗಿದ್ದು, ಚುನಾವಣೆ ಮತ್ತಿತರ ಕಾರಣಗಳಿಂದ ಈ ಪ್ರಕ್ರಿಯೆ ನಿಧಾನಗತಿಯಲ್ಲಿ ಸಾಗಿತ್ತು. ಹೀಗಾಗಿ ಅವುಗಳನ್ನು ಎಲ್ಲ ರೀತಿಯ ಸಮಸ್ಯೆಯಿಂದ ಪಾರು ಮಾಡಿ ಬೇಗನೆ ಎಲ್ಲರಿಗೂ ಪಡಿತರ ಚೀಟಿ ನೀಡುವಂತೆ ಮುನಿಯಪ್ಪನವರು ಆದೇಶ ಹೊರಡಿಸಿದ್ದಾರೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *