ದ್ವಿತೀಯ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಪೂರ್ತಿ ವೀಕ್ಷಿಸಿ. ಹಾಸನ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ ಮೂವತೈದು ವರ್ಷ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.ವೇತನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 15,196 ರಂತೆ ವೇತನ ನೀಡಲಾಗುತ್ತದೆ. ಆಯ್ಕೆ ವಿಧಾನ, ಶೈಕ್ಷಣಿಕ ಅರ್ಹತೆಯ ಅಲ್ಲಿನ ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಒಂದು ವೇಳೆ ಇಬ್ಬರು ಅಥವಾ ಹೆಚ್ಚಿನ ಅಭ್ಯರ್ಥಿಗಳು ಸಮಾನವಾದ ಅಂಕಗಳನ್ನು ಹೊಂದಿದ್ದಲ್ಲಿ ವಯಸಿನಲ್ಲಿ ಹಿರಿಯರಾದವರನ್ನು ಆಯ್ಕೆಗೆ ಪರಿಗಣಿಸಲಾಗುವುದು.ಅರ್ಜಿ ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ನ ಅಧಿಕೃತ ವೆಬ್ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿ ಶುಲ್ಕ, ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹500.2A,2B ಈ ವರ್ಗದ ಅಭ್ಯರ್ಥಿಗಳು ₹300 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದು ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು ₹200. ಅಂಗವಿಕಲ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು.ಶುಲ್ಕ ಪಾವತಿಸುವ ವಿಧಾನ ಮುಖ್ಯ ಲೆಕ್ಕಾಧಿಕಾರಿಗಳು ಜಿಲ್ಲಾ ಪಂಚಾಯತ್, ಹಾಸನ ಇವರ ಬ್ಯಾಂಕ್ ಖಾತೆಗೆ ಜಮಾ ಮಾಡಿ ಅಥವಾ ಅಧಿಸೂಚನೆಯಲ್ಲಿ ನೀಡಿರುವ ಕೋಡ್ ಸ್ಕ್ಯಾನ್ ಮಾಡಿ ಶುಲ್ಕ ಪಾವತಿಸಬಹುದು. ಹುದ್ದೆ ಹೆಸರು, ಗ್ರಾಮ ಪಂಚಾಯಿತಿ, ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು. ಹುದ್ದೆಗಳ ಸಂಖ್ಯೆ ಒಟ್ಟು 12 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ.

ಉದ್ಯೋಗ ಸ್ಥಳ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾಸನ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಕೆಲಸ ನಿರ್ವಹಿಸಬೇಕು. ವಿದ್ಯಾರ್ಹತೆ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಟ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಪಡೆದಿರತಕ್ಕದ್ದು ಹಾಗೂ ಕನಿಷ್ಠ ಮೂರು ತಿಂಗಳು ಕಂಪ್ಯೂಟರ್ ಕೋರ್ಸ್ ನಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸಲು ಶುರುವಾಗುವ ದಿನ 22 ಫೆಬ್ರವರಿ ಯಿಂದ ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಎಂದರೆ ಮಾರ್ಚ್ 22 ರಂದು. ಹಾಗೆ ಅರ್ಜಿ ಸಲ್ಲಿಸಲು ಇಲ್ಲಿದೆ ನೋಡಿ ಲಿಂಕ್ https://hassan.nic.in/en/notice/online-recruitment/ ಹಾಗೆಯೇ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ನಿಮ್ಮ ಸ್ನೇಹಿತರು ಹಾಗೆ ಕುಟುಂಬದೊಂದಿಗೆ ಹಂಚಿಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಮರೆಯಬೇಡಿ.

Leave a Reply

Your email address will not be published. Required fields are marked *