ಹತ್ತನೇ ತರಗತಿ ಹಾಗೂ ಪಿಯುಸಿ ಪಾಸಾಗಿರುವ ಅಭ್ಯರ್ಥಿಗಳಿಂದ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ ವಯೋಮಿತಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ಮೂವತೈದು ವರ್ಷ.ಥ್ರೀ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಪ್ರವರ್ಗ ಒಂದರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.ವೇತನ ಶೀಘ್ರಲಿಪಿಗಾರರು ಹುದ್ದೆಗೆ ಮಾಸಿಕ ರೂಪಾಯಿ 27,000 ರಿಂದ 52,000 ಬೆರಳಚ್ಚುಗಾರರು ಹುದ್ದೆಗೆ ಮಾಸಿಕ ರೂಪಾಯಿ 21,400 ರಿಂದ 42,000 ಜವಾನ ಹುದ್ದೆಗೆ ಮಾಸಿಕ ರೂಪಾಯಿ 15000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.ಆಯ್ಕೆ ವಿಧಾನ, ಶೀಘ್ರಲಿಪಿಗಾರ ಹಾಗೂ ಬೆರಳಚ್ಚುಗಾರ ಹುದ್ದೆಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಬೆರಳಚ್ಚು ಯಂತ್ರ ಅಥವಾ ಗಣಕಯಂತ್ರದಲ್ಲಿ ಬೆರಳಚ್ಚು ಮಾಡಿಸಿ ಅರ್ಹತಾ ಪರೀಕ್ಷೆ ನಡೆಸಲಾಗುವುದು. ಜವಾನ ಹುದ್ದೆಗೆ ಹತ್ತನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ, ಸಾಮಾನ್ಯ ವರ್ಗದ ಅಭ್ಯರ್ಥಿಗಳು ₹200 ಪ್ರವರ್ಗ, ಎರಡು ಎ, ಎರಡು ಬಿ, ಮೂರು ಎ, ಮೂರು ಬಿ ವರ್ಗದ ಅಭ್ಯರ್ಥಿಗಳು ₹100 ಅರ್ಜಿ ಶುಲ್ಕ ಪಾವತಿಸಬೇಕು. ಎಸ್‌ಸಿ ಎಸ್‌ಟಿ ಪ್ರವರ್ಗ ಒಂದು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.ಶುಲ್ಕ ಪಾವತಿಸುವ ವಿಧಾನ, ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್.ಸಲ್ಲಿಸುವ ವಿಧಾನ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.

ಹುದ್ದೆಯ ಹೆಸರು ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಹುದ್ದೆಗಳ ಸಂಖ್ಯೆ ಒಟ್ಟು 30 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅದರಲ್ಲಿ ಶೀಘ್ರಲಿಪಿಗಾರರು ಒಂದು ಹುದ್ದೆ ಬೆರಳಚ್ಚುಗಾರರು, ಐದು ಹುದ್ದೆ, ಜವಾನ 24 ಹುದ್ದೆ ಖಾಲಿ ಇದೆ.ವಿದ್ಯಾರ್ಹತೆ, ಶೀಘ್ರಲಿಪಿಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಎರಡು ಭಾಷೆಗಳಲ್ಲಿ ಹಿರಿಯ ಶ್ರೇಣಿ, ಶೀಘ್ರಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೊಮಾ ವಾಣಿಜ್ಯ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಬೆರಳಚ್ಚು ಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೊಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

Leave a Reply

Your email address will not be published. Required fields are marked *